ಉಡುಪಿ (www.vknews.in) : ಅಸ್ವಸ್ಥ ಗೊಂಡ ಯುವತಿಯನ್ನು ಆಸ್ಪತ್ರೆಗೆ ತಲುಪಿಸಿ ಚಾಲಕ ಹಾಗೂ ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ. ಕರಾವಳಿಯ ಖಾಸಗಿ ಬಸ್ ನ ಚಾಲಕ ಹಾಗೂ ನಿರ್ವಾಹಕರು ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ, ಆಗಸ್ಟ್ 5ರ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದೆ.
ಶಿರ್ವ ದಿಂದ ಉಡುಪಿಗೆ ನವೀನ್ ಬಸ್ಸಿನಲ್ಲಿ ಉಡುಪಿಗೆ ಬರುತ್ತಿದ್ದ ಯುವತಿ ಉಡುಪಿಯ ಹಳೆ ತಾಲ್ಲೂಕು ಕಚೇರಿಗೆ ಬರುತ್ತಿದ್ದಂತೆ ಬಸ್ಸಿನಲ್ಲೇ ವಾಂತಿ ಮಾಡಿ ಅಸ್ವಸ್ಥಗೊಂಡಿದ್ದಾಳೆ, ಕೂಡಲೇ ಎಚ್ಚೆತ್ತ ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಬಸ್ಸನ್ನು ತಕ್ಷಣವೇ ಟಿಎಂಎ ಪೈ ಆಸ್ಪತ್ರೆಗೆ ಕೊಂಡೊಯ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಜೊತೆಗೆ ಬಾಲಕಿಯ ಮನೆಯವರಿಗೆ ಮಾಹಿತಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬಂದಿ ಸಹಕಾರ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಇದೇ ರೀತಿಯ ಮಾನವೀಯ ಕಾರ್ಯ ನಡೆದಿದ್ದು ಇದೀಗ ಉಡುಪಿಯಲ್ಲೂ ಅಂತಹುದೇ ಮಾನವೀಯ ನಡೆದಿದ್ದು ನವೀನ್ ಬಸ್ ಸಿಬಂದಿಗಳ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.