ಧಾರವಾಡ (www.vknews.in) : ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಬುಧವಾರ(ಆ.7) ಧಾರವಾಡದ ರೋಟರಿ ಕ್ಲಬ್ ಮಿಡ್ಟೌನ್ ಅಮ್ಮಿನಬಾವಿ ಗ್ರಾಮದ ಶ್ರೀಶಾಂತೇಶ್ವರ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಜಾಗೃತಿ ಜಾಥಾ ಜರುಗಿತು. ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ರೋಟರಿ ಕ್ಲಬ್ನ ಪದಾಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುವಂತಹ ಭಿತ್ತಿಪಟಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಅಮ್ಮಿನಬಾವಿ ಗ್ರಾಮದ ಎಲ್ಲಾ ಬೀದಿ-ಬಡಾವಣೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಗಮನ ಸೆಳೆದರು.
ಬೀದಿ ನಾಟಕ : ಜಾಥಾ ಅಂಗವಾಗಿ ಅಮ್ಮಿನಬಾವಿ ಗ್ರಾಮದ ಶ್ರೀಶಾಂತೇಶ್ವರ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ನೀಲಾ ಅರಳಿಮಟ್ಟಿ ಅವರ ನಿರ್ದೇಶನದಲ್ಲಿ ವಿದ್ಯಾರ್ಥಿನಿಯರು ಪ್ರಸ್ತುತಪಡಿಸಿದ ಬೀದಿ ನಾಟಕ ಸಾರ್ವಜನಿಕರ ಗಮನ ಸೆಳೆಯಿತು. ವಿದ್ಯಾರ್ಥಿನಿಯರು ಕುಟುಂಬದ ಪಾತ್ರಧಾರಿಗಳಾಗಿ ದಿನನಿತ್ಯದ ಘಟನಾವಳಿಗಳನ್ನು ಸೇರಿಸಿಕೊಂಡು ಡೆಂಗ್ಯೂ ಹರಡಲು ನಮ್ಮ ನಿರ್ಲಕ್ಷತೆ, ಉದಾಸೀನತೆ ಹೇಗೆ ಕಾರಣವಾಗುತ್ತದೆ ಎಂಬುದನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾದರು.
ಅಮ್ಮಿನಬಾವಿಯ ಗ್ರಾಮ ಪಂಚಾಯತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವಿವಿಧ ಸಿಬ್ಬಂದಿ ಗ್ರುಪ್ ಎಜ್ಯೂಕೇಶನ್ ಕಮೀಟಿ ಪದಾಧಿಕಾರಿಗಳು ಹಾಗೂ ಯುವಕ-ಯುವತಿಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.