ಕೊಪ್ಪಳ (www.vknews.in) : ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ನ ಚೈನ್ಲಿಂಕ್ ಶನಿವಾರ (ಆ.10) ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ. ತುಂಗಭದ್ರಾ ಜಲಾಶಯದ ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ಮುರಿದು ಹೋಗಿರುವ ಕಾರಣ ಅದನ್ನು ಸರಿಪಡಿಸಲು ಜಲಾಶಯದ 60 ಟಿಎಂಸಿ ಅಡಿ ನೀರನ್ನು ಖಾಲಿ ಮಾಡಬೇಕಾಗಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರದಿಂದ ಇರಬೇಕು ಎಂದು ಸೂಚಿಸಲಾಗಿದೆ.
ಅಣೆಕಟ್ಟೆಯ 19ನೇ ಗೇಟ್ನ ಚೈನ್ ಲಿಂಕ್ ಮುರಿದಿರುವುದು ಅಣಕಟ್ಟೆಯ ಗೇಟ್ ಲಿಂಕ್ ಮುರಿದ ನಂತರ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಜಲಾಶಯ ನೋಡಲು ಬರುವ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.