ಬೆಂಗಳೂರು (www.vknews.in) : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕುತ್ತಿಗೆ ಹಿಸುಕಿ ಕೊಲೆಗೈದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ವೈಟ್ಫೀಲ್ಡ್ನ ಹಗದೂರು ನಿವಾಸಿ ಮಹೇಶ್ (36) ಕೊಲೆಯಾದ ವ್ಯಕ್ತಿ. ಪ್ರಕರಣದಲ್ಲಿ ಆತನ ಪತ್ನಿ ತೇಜಸ್ವಿನಿ ಮತ್ತು ಆಕೆಯ ಪ್ರಿಯಕರ ಗಜೇಂದ್ರ (35) ಎಂಬಾತನನ್ನು ಬಂಧಿಸಲಾಗಿದೆ.
ಹಾಸನದ ಅರಕಲಗೂಡಿನ ದೊಂಬರಪಾಳ್ಯ ನಿವಾಸಿ ಮಹೇಶ್ ಮತ್ತು ತೇಜಸ್ವಿನಿ ಕೆಲ ವರ್ಷಗಳ ಹಿಂದೆಯೇ ಮದುವೆಯಾಗಿದ್ದು, ಬಳೊಕ ವೈಟ್ಫೀಲ್ಡ್ನ ಹಗದೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮಹೇಶ್, ಆಟೋ ಚಾಲಕನಾಗಿದ್ದು, ರಂಗೋಲಿ ಸಹ ಮಾರಾಟ ಮಾಡುತ್ತಿದ್ದರು. ತೇಜಸ್ವಿನಿ, ಖಾಸಗಿ ಫೈನಾನ್ಸ್ನಲ್ಲಿ ಸಾಲ ವಸೂಲಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.
ಇನ್ನೂ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು. ಇದರೊಂದಿಗೆ ತೇಜಸ್ವಿನಿ, ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಗಜೇಂದ್ರನ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ತೇಜಸ್ವಿನಿ ಮತ್ತು ಗಜೇಂದ್ರ ಮನೆಯಲ್ಲಿ ಒಟ್ಟಿಗೆ ಇದ್ದರು. ಇದೇ ವೇಳೆ ಮಹೇಶ್ ಮನೆಗೆ ಬಂದಿದ್ದು, ಪತ್ನಿ ಜತೆ ಗಜೇಂದ್ರನ ಕಂಡ ಮಹೇಶ್, ಪತ್ನಿ ಮೇಲೆ ಹಲ್ಲೆ ನಡೆಸಿದ್ದ. ಆಗ ಪತ್ನಿ ತೇಜಸ್ವಿನಿ ಮತ್ತು ಆಕೆಯ ಪ್ರಿಯಕರ ಗಜೇಂದ್ರ ಸೇರಿ ಮಹೇಶ್ ಮೇಲೆ ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿ ಕೊಲೆ ಗೈದಿದ್ದಾರೆ.
ಬಳಿಕ ಮನೆಯಲ್ಲಿ ತನ್ನ ಗಂಡ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಪತ್ನಿ ತೇಜಸ್ವಿನಿ ಪೊಲೀಸರ ಮುಂದೆ ನಾಟಕವಾಡಿದ್ದರು. ಆದರೆ, ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.