ಬೆಂಗಳೂರು (www.vknews.in) : ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಮೊಬೈಲ್ ಇಟ್ಟಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ ಬಂಧಿತ ಆರೋಪಿಯಾಗಿದ್ದಾನೆ.
ಕಾಫಿ ಶಾಪ್ನಲ್ಲಿ ಕಾಫಿ ಮೇಕರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಮನೋಜ್, ಶನಿವಾರ ಬೆಳಗ್ಗೆ ಮಹಿಳೆಯರ ಶೌಚಾಲಯಕ್ಕೆ ಹೋಗಿದ್ದಾನೆ. ಅಲ್ಲಿ ಕಸದ ಬುಟ್ಟಿಗೆ ಹೋಲ್ ಮಾಡಿದ್ದಾನೆ. ನಂತರ ಮೊಬೈಲ್ ಅನ್ನು ಫ್ಲೈಟ್ ಮೂಡ್ಗೆ ಹಾಕಿ ವಿಡಿಯೋ ಚಿತ್ರಕರಣಕ್ಕೆ ಇರಿಸಿ, ಹೊರ ಬಂದು ಯಥಾಪ್ರಕಾರ ತನ್ನ ಕೆಲಸದಲ್ಲಿ ತೊಡಗಿಕೊಂಡಿದ್ದಾನೆ. ನಂತರ ಶೌಚಾಲಯಕ್ಕೆ ಹೋದ ಮಹಿಳೆಯೊಬ್ಬರು ಮೊಬೈಲ್ ಇರುವುದನ್ನು ಗಮನಿಸಿದ್ದಾರೆ. ಅವರು ತಕ್ಷಣವೇ ಪೊಲೀಸರಿಗೆ ವಿಚಾರ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಸದಾಶಿವನಗರ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.