(www.vknews.in) ; ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು(ರಿ)ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಸಹಯೋಗದದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ 456 ನೇ ಬೃಹತ್ ರಕ್ತದಾನ ಶಿಬಿರವು ಬೆಂಗಳೂರಿನ ಗಾಂಧಿನಗರದ ಕೆ ಜಿ ಸರ್ಕಲ್ ಬಳಿ ನಡೆಯಿತು..
ಮುಂಜಾನೆಯಿಂದ ಮಧ್ಯಾಹ್ನದ ತನಕ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ಸಾರ್ವಜನಿಕರು ಬಹಳ ಉತ್ಸಾಹದಿಂದಲೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾದರು.ತುರ್ತು ಕರೆಗೆ ತಕ್ಷಣವೇ ಸ್ಪಂದಿಸಿ ಸಿಂಗಲ್ ಡೋನರ್ ಪ್ಲೇಟ್ಲೆಟ್ ರಕ್ತವನ್ನು ದಾನ ಮಾಡಿದ ಸಾಮಾಜಿಕ ಕಾರ್ಯಕರ್ತ ರಹೀಮ್ಚಿಕ್ಕಪೇಟೆ ಇವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ಅಧ್ಯಕ್ಷರಾದ ಉದ್ಯಮಿ ಶಬೀರ್ ಬ್ರಿಗೇಡ್, ಬಿ ಸಿ ಸಿ ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ,ನ್ಯಾಯವಾದಿಗಳಾದ ಅಥಾವುಲ್ಲಾ ಪುಂಜಾಲಕಟ್ಟೆ, ಬಿ ಸಿ ಸಿ ಯ ವೇದ್ಯಕೀಯ ಉಸ್ತುವಾರಿ ಬದ್ರುದ್ದೀನ್,ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಗೌರವಾಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ, ಅಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಬಿ ಡಿ ಎಂ ಉಪಾಧ್ಯಕ್ಷರಾದ ಅಶ್ರಫ್ ಸಿ ಎಂ, ಪ್ರಧಾನ ಕಾರ್ಯದರ್ಶಿಗಳಾದ ಶಾಹುಲ್ ಹಮೀದ್ ಕಾಶೀಪಟ್ನ ಹಾಗೂ ಬ್ಯಾರೀಸ್ ಸೆಂಟ್ರಲ್ ಕಮಿಟಿ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.