ಜೆದ್ದಾ(www.vknews.in):ಸೌದಿ ಅರೇಬಿಯಾದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಪ್ರವಾಹಕ್ಕೆ ಸಿಲುಕಿ 9 ಮಂದಿ ಮೃತರಾಗಿದ್ದಾರೆ. ನೈಋತ್ಯ ಪ್ರದೇಶದ ಜೀಝಾನ್ ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಸೌದಿ ಸುದ್ದಿ ಪೋರ್ಟಲ್ ಸಬ್ಕ್ ಪ್ರಕಟಿಸಿದ ವರದಿ ತಿಳಿಸಿದೆ.
ಇದಕ್ಕೂ ಮುನ್ನ, ಪ್ರವಾಹದಲ್ಲಿ ಮುಳುಗಿದ ಮೂವರ ಶವಗಳನ್ನು ಸಿವಿಲ್ ಡಿಫೆನ್ಸ್ ಪತ್ಕೆಹಚ್ಚಿತ್ತು. ಪ್ರವಾಹದಲ್ಸಿ ಇಬ್ಬರು ಮಕ್ಕಳು ಮತ್ತು 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಜಸ್ಸಾನ್ ನ ಸಬಿಯಾ ಮತ್ತು ಅಬು ಅರಿಶ್ ಪ್ರದೇಶಗಳನ್ನು ಸಂಪರ್ಕಿಸುವ ಸೇತುವೆ ಭಾಗಶಃ ಕುಸಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದರು. ಇದಲ್ಲದೇ ಹಲವು ಸಾವುನೋವುಗಳು ವರದಿಯಾಗುತ್ತಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.