ಮಂಗಳೂರು (www.vknews.in) : ಪ್ರೇಯಸಿ ಕೈಕೊಟ್ಟಿದ್ದಾಳೆಂದು ಮನನೊಂದ ಯುವಕ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ತಾರೆಮಾರ್ ಅರ್ಭಿ ಎಂಬಲ್ಲಿ ನಡೆದಿದೆ. ಚಂದ್ರಶೇಖರ (32) ಆತ್ಮಹತ್ಯೆಗೆ ಶರಣಾದ ಯುವಕ.
ಮೇಸ್ತ್ರಿ ಕೆಲಸ ಮಾಡುತ್ತಿದ್ದ ಈತ ಹಲವು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆಕೆ ದೂರವಾಗುತ್ತಿದ್ದಂತೆ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಚಂದ್ರಶೇಖರ ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದಿದ್ದಾನೆ. ಬಳಿಕ ಸ್ನೇಹಿತನೊಬ್ಬನಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಬೈಕ್ ಇರುವ ಜಾಗ ತಿಳಿಸಿ ಅದನ್ನು ಕೊಂಡೊಯ್ಯುವಂತೆ ತಿಳಿಸಿದ್ದಾನೆ.
ಆತ ಸೂಚಿಸಿದ್ದ ಸ್ಥಳಕ್ಕೆ ಆಗಮಿಸಿದಾಗ ಚಂದ್ರಶೇಖರ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ತಾನು ಆತ್ಮಹತ್ಯೆ ಮಾಡಲು ಪ್ರೀತಿಸುತ್ತಿದ್ದ ಯುವತಿಯೇ ಕಾರಣ ಎಂದು ಡೆತ್ನೋಟ್ ನಲ್ಲಿ ಬರೆದಿದ್ದು ಆಕೆಯ ಹೆಸರು ಮೊಬೈಲ್ ನಂಬರ್ ಬರೆದಿಟ್ಟಿದ್ದಾನೆ. ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.