ಕೋಲಾರ (ವಿಶ್ವ ಕನ್ನಡಿಗ ನ್ಯೂಸ್):ಜಿಲ್ಲೆಯಾದ್ಯಂತ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿರುವವರ ವಿರುದ್ಧ ಕಾಯ್ದೆಯನುಸಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪ್ರತಿ ತಾಲ್ಲೂಕುವಾರು ಸಮಿತಿ ರಚಿಸಿ ಮುಂದಿನ ಕ್ರಮ ವಹಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಆದೇಶಿಸಿದ್ದಾರೆ. ಸಾರ್ವಜನಿಕರಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಉಪಯೋಗಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸುತ್ತಿರುವ,ಉತ್ಪಾದಿಸುತ್ತಿರುವ ಹಾಗೂ ಮಾರಾಟ ಮಾಡುತ್ತಿರುವವರ ಮಳಿಗೆ,ಕಾರ್ಖಾನೆಗಳು,ಇವುಗಳ ಮೇಲೆ ಅನಿರೀಕ್ಷಿತ ದಾಳಿಗಳನ್ನು ಕೈಗೊಂಡು ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳು ಕಂಡುಬಂದಲ್ಲಿ ಜಪ್ತಿ ಮಾಡಿ ಅವರುಗಳ ವಿರುದ್ಧ ದಂಡ ಹಾಗೂ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕೆಂದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು,ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡುವುದು.
ಜಿಲ್ಲಾಡಳಿತ ವತಿಯಿಂದ ನೀಡಿ ಹೆಚ್ಚಿನ ರೀತಿಯಲ್ಲಿ ಸಾರ್ವಜನಿಕರಿಗೆ ತಲುಪುವ ರೀತಿಯಲ್ಲಿ ಜಾಗೃತಿ ಫಲಕಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲು ಕ್ರಮ ವಹಿಸುವುದು.ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಾರಿಗೆ ಇಲಾಖೆ ರವರು ಜಿಲ್ಲೆಯ ಗಡಿ ಭಾಗಗಳಲ್ಲಿ ಹೊರ ರಾಜ್ಯಗಳಿಂದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳು ಜಿಲ್ಲೆಗೆ ಬಾರದಂತೆ ತಡೆಯಲು ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಸೂಚಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.