ಬಂಟ್ವಾಳ (www.vknews.in): ನೆಟ್ಲಮುಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಲಾ ಗೌರವಾಧ್ಯಕ್ಷ ಜಯರಾಮ ರೈ ಧ್ವಜರೋಹಣಗ್ಯೆದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಿತಾ ಡಿ.ಪೂಜಾರಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಸದಸ್ಯರಾದ ಲತೀಫ್ ನೇರಳಕಟ್ಟೆ, ಧನುಂಜಯ ಗೌಡ, ಶಕೀಲಾ ಕೆ.ಪೂಜಾರಿ, ಎಸ್ಡಿಎಂಸಿ ಉಪಾಧ್ಯಕ್ಷ ಪ್ರಸಾದ್ ಆಚಾರ್ಯ, ನಿವೃತ್ತ ಯೋಧ ಶಿವಪ್ರಕಾಶ್ ಕುವೆತ್ತಿಲ, ಅನೂಪ್ ಆಳ್ವ, ಡಾ.ಪ್ರಜ್ವಿತ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ಸ್ವಾಗತಿಸಿ, ಸಹ ಶಿಕ್ಷಕ ಉದಯ ವಂದಿಸಿದರು. ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.