ಬೆಂಗಳೂರು (www.vknews.in) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂಪರಿವರ್ತನೆ ಪ್ರಕರಣದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಭೂ ಹಸ್ತಾಂತರದ ಮೂಲಕ ಮುಖ್ಯಮಂತ್ರಿ ಪತ್ನಿ ಮತ್ತಿತರರು ಲಾಭ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ರಾಜ್ಯಪಾಲರು ಕಳೆದ ತಿಂಗಳು ಮುಖ್ಯಮಂತ್ರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಕಾನೂನು ಕ್ರಮ ಕೈಗೊಳ್ಳದಿರಲು ಕಾರಣವಿದ್ದಲ್ಲಿ ಏಳು ದಿನಗಳಲ್ಲಿ ತಿಳಿಸುವಂತೆ ಸೂಚಿಸಿದ್ದರು. ಇದರ ವಿರುದ್ಧ ರಾಜ್ಯ ಸಚಿವ ಸಂಪುಟ ನಿರ್ಣಯ ಅಂಗೀಕರಿಸಿದ್ದು, ಸಾಂವಿಧಾನಿಕ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳದಂತೆ ರಾಜ್ಯಪಾಲರನ್ನು ಕೋರಿತ್ತು. ಈ ಪ್ರಕರಣ ರಾಜಕೀಯ ಪ್ರೇರಿತ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.