ಬಂಟ್ವಾಳ (www.vknews.in) : ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಅ.20 ರಂದು ಮಂಗಳವಾರ ಮುಂಜಾನೆ ವೇಳೆ ನಡೆದಿದೆ. ಕೋಕಲ ನಿವಾಸಿ ಸಾಯಿ ಶಾಂತಿ ಅವರ ಮಗ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಉಜಿರೆ ಕಾಲೇಜಿನ ಪದವಿ ವ್ಯಾಸಂಗ ಮಾಡುತ್ತಿದ್ದ ಈತ ಮಂಗಳವಾರ ಮುಂಜಾನೆ 5 ರ ವೇಳೆಗೆ ಮನೆ ಸಮೀಪದ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈತನ ತಾಯಿ ಶಕುಂತಲಾ ಅವರು 2013 ರಲ್ಲಿ ಬಿಸಿರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಸಾವನ್ನಪ್ಪಿದ್ದರು. ತನ್ನ ಸಾವಿಗೆ ಕಾರಣವನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.