ಶಿವಮೊಗ್ಗ (www.vknews.in) : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರು ಕಾನೂನುಬದ್ಧವಾಗಿ ಹೋರಾಟ ಮಾಡಿ ಕ್ಲೀನ್ ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ ಎಂದು ಹೇಳಿದ್ದಾರೆ.
ನನ್ನ ಮೇಲೆ ಆಪಾದನೆ ಬಂದಾಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ಅವರು ಕೂಡ ತನಿಖೆಗೆ ಸಹಕಾರ ಕೊಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದ ಈಶ್ವರಪ್ಪ ಅವರು, ಅವರ ಶ್ರೀಮತಿಯವರನ್ನು ಎಲ್ಲಿ ಇದರಲ್ಲಿ ಸೇರಿಸಿಬಿಡುತ್ತಾರೋ ಎಂಬ ಅನುಮಾನವಿದೆ. ಪಾಪ ಅವರು ಗೌರಮ್ಮ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬಾರದೇ ಇರಲಿ ಎಂದು ಬೇಡಿಕೊಳ್ಳುತ್ತೇನೆ ಎಂದು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.