(www.vknews.in) ; ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿಯಾದ ಸಾರ್ಜೆಂಟ್ ಸುನಿಲ್ ಕುಮಾರ್, ಮೆಟಲ್ ನಂ. 02 ಮಂಗಳೂರು ಘಟಕ ಇವರು ರಾಜೀನಾಮೆ ನೀಡಿದ್ದು, ಉಳ್ಳಾಲ ಘಟಕದ ಗೃಹರಕ್ಷಕ ಸುನಿಲ್, ಮೆ.ನಂ. 822 ಇವರಿಗೆ ದಿನಾಂಕ: 21-08-2024 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿಯಾಗಿ ನೇಮಿಸಿ ಜಿಲ್ಲಾ ಕಛೇರಿಯಿಂದ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕದಳದ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ಎ., ಮತ್ತು ಉಳ್ಳಾಲ ಘಟಕದ ಮಾಜಿ ಪ್ರಭಾರ ಘಟಕಾಧಿಕಾರಿ ಶ್ರೀ ಸುನಿಲ್ ಕುಮಾರ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.