ಯಾದಗಿರಿ (www.vknews.in) : ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗೆ ಶಿಕ್ಷಕ ಮನಸ್ಸೋ ಇಚ್ಛೆ ಥಳಿಸಿದ ಘಟನೆ ನಡೆದಿದೆ. ವಿದ್ಯಾರ್ಥಿ ಮೇಲೆ ಶಿಕ್ಷಕ ಕ್ರೌರ್ಯ ಮೆರೆದಿದ್ದಾನೆ. ಚಡಿ ಏಟಿನಿಂದ ಬಾಲಕನ ಬೆನ್ನಿನ ಮೇಲೆ ಬಾಸುಂಡೆ ಬರುವ ಹಾಗೆ ಬಾರಿಸಿದ್ದಾನೆ.
ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಘಟನೆ ಸೈದಾಪುರ ಪಟ್ಟಣದಲ್ಲಿರುವ ಮಹಾವೀರ್ ಜೈನ್ ಆಂಗ್ಲ ಮಾಧ್ಯಮ ಖಾಸಗಿ ಶಾಲಾ ಶಿಕ್ಷಕನಿಂದ ನಡೆದಿದ್ದು, ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ ಎಂಬ ಬಾಲಕ ಗಣಿತದಲ್ಲಿ ಕಡಿಮೆ ಅಂಕ ಪಡೆದ ಎಂಬ ಕಾರಣಕ್ಕೆ ಶಿಕ್ಷಕ ಡೆಲ್ವೀಲ್ ಮನ ಬಂದಂತೆ ಥಳಿಸಿದ್ದಾನೆ.
ಆಗಸ್ಟ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಥಳಿತಕ್ಕೆ ಒಳಗಾದ ವಿದ್ಯಾರ್ಥಿ ಯುವರಾಜ್ ತನ್ನ ಪಾಲಕರಿಗೆ ವಿಷಯ ತಿಳಿಸಿದ್ದು ಶಿಕ್ಷಕನ ವಿರುದ್ಧ ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.