ಹುಬ್ಬಳ್ಳಿ، (ವಿಶ್ವ ಕನ್ನಡಿಗ ನ್ಯೂಸ್) :ವಖ್ಫ್ ಆಸ್ತಿ ಸಂರಕ್ಷಣೆ ದೇವರ ಕೆಲಸ. ನಿಮ್ಮ ಕೈಮುಗಿದು ಮನವಿ ಮಾಡುತ್ತೇನೆ. ಈ ಆಸ್ತಿ ಸಮುದಾಯದ ಒಳಿತಿಗಾಗಿ ಬಳಸಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಮನವಿ ಮಾಡಿದರು.
ಹುಬ್ಬಳ್ಳಿ ಯಲ್ಲಿ ವಖ್ಫ್ ಅದಾಲತ್ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಖ್ಫ್ ಆಸ್ತಿ ಸರಿಯಾಗಿ ನಿರ್ವಹಣೆ ಮಾಡಿದರೆ ಸರ್ಕಾರದಿಂದ ನಾವು ಅನುದಾನ ಕೇಳುವ ಪರಿಸ್ಥಿತಿ ಯೇ ಬರುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ 47 ಸಾವಿರ ವಖ್ಫ್ ಆಸ್ತಿ ಗಳಿದ್ದು, 23 ಸಾವಿರ ಆಸ್ತಿ ಗಳು ಒತ್ತುವರಿ, ವಿವಾದ, ನ್ಯಾಯಾಲಯದಲ್ಲಿ ದಾವೆ ಯಿಂದ ಕೂಡಿವೆ. ಈ ಆಸ್ತಿ ಸಂರಕ್ಷಣೆ ನಮ್ಮ ಕರ್ತವ್ಯ ಆಗಬೇಕು ಎಂದು ತಿಳಿಸಿದರು.
ವಖ್ಫ್ ಆಸ್ತಿ ಸಂರಕ್ಷಣೆ ಮಾಡಿ ತಾಲೂಕಿಗೊಂದು ಆಸ್ಪತ್ರೆ, ಜಿಲ್ಲೆಗೊಂದು ಮಹಿಳಾ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ವಖ್ಫ್ ಮಂಡಳಿ ಯಲ್ಲಿ ಕೆಲಸ ಮಾಡುವವರಿಗೆಸಮುದಾಯದ ಸೇವೆ ಮಾಡುವ ಅವಕಾಶ ಸಿಗುತ್ತದೆ. ಇದೊಂದು ಪುಣ್ಯದ ಕೆಲಸ ಎಂದು ಹೇಳಿದರು.
ವಖ್ಫ್ ಬೋರ್ಡ್ ನಲ್ಲಿ ಹಲವಾರು ಸಮುದಾಯಕ್ಕೆ ನೆರವಾಗುವ ಕೆಲಸ ಮಾಡಿದ್ದೇವೆ. ತಾಲೂಕಿಗೆ ಒಂದು ಫ್ರೀಜರ್, ಜಿಲ್ಲೆಗೆ ಒಂದು ಆಂಬುಲೆನ್ಸ್ ನೀಡಲಾಗಿದೆ. ಪ್ರತಿ ಜಿಲ್ಲೆಗೆ ಒಂದು ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರಮುಖ ದರ್ಗಗಳನ್ನು ಅಭಿವೃದ್ಧಿಪಡಿಸಲು 25 ಕೋಟಿ ರೂ. ಯೋಜನೆ ಸಿದ್ದಪಡಿಸಲಾಗಿದೆ ಎಂದು ಹೇಳಿದರು.
ಮುಖ್ಯ ಸಚೇತಕ ಸಲೀಂ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಮಾಜಿ ಸಚಿವ ಹಿಂಡಸಗೇರಿ, ಮಾಜಿ ಸಂಸದ ಐ ಜಿ ಸನದಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.