ಬಂಟ್ವಾಳ (www.vknews.in) : ದ.ಕ.ಜಿಲ್ಲಾಡಳಿತ ಮತ್ತು ಜಿ.ಪಂ, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ-ಉಪನಿರ್ದೇಶಕರ ಕಚೇರಿ, ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ದ.ಕ.ಜಿಲ್ಲಾ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯು ವಳವೂರು ಬಂಟರ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಶಿಕ್ಷಕರು ಹಳ್ಳಿಯಲ್ಲಿದ್ದೇವೆ ಎಂಬ ಕೀಳರಿಮೆಯನ್ನು ಬಿಟ್ಟು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಗುಣಮಟ್ಟದ ಶಿಕ್ಷಣದತ್ತ ಗಮನಹರಿಸಬೇಕು. ಶಿಕ್ಷಕರ ಒತ್ತಡ ನಿಯಂತ್ರಣಕ್ಕೆ ಪ್ರಕೃತಿಯ ಜತೆ ಕಾರ್ಯಕ್ರಮ ನಡೆಸಲು ಯೋಜನೆ ಹಾಕಿಕೊಂಡಿದ್ದು, ಎಲ್ಲರ ಸಹಕಾರ ಅಗತ್ಯ ಎಂದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಡಿ.ಎಸ್.ಮಮತಾ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕೆ, ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಚಿನ್ಕುಮಾರ್, ಡಯೆಟ್ ಪ್ರಾಂಶುಪಾಲೆ ರಾಜಲಕ್ಷ್ಮೀ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್, ಸರಕಾರಿ ನೌಕರರ ಸಂಘ ಹಾಗೂ ವಿವಿಧ ಶಿಕ್ಷಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು. ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. ಡಿಡಿಪಿಐ ವೆಂಕಟೇಶ ಸುಬ್ರಾಯ ಪಟಗಾರ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದ.ಕ.ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಪ್ರಸ್ತಾವನೆಗೈದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.