(www.vknews.in) ; ನ್ಯಾಯವಾದಿ ನೂರುದ್ದೀನ್ ಸಾಲ್ಮರ ರವರಿಗೆ, ಕಾಂಗ್ರೆಸ್ ಪಕ್ಷದಿಂದ, ಸರಕಾರಿ ನೇಮಕಾತಿಗಳಲ್ಲಿ, ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ, ಅಹಿಂದ ನಾಯಕರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಅಭಿಯಾನ ಆರಂಭ.
ಮಂಗಳೂರು:ಪುತ್ತೂರಿನ ಖ್ಯಾತ ನ್ಯಾಯವಾದಿಯು, ಅಹಿಂದ ನಾಯಕರು, ಕಾಂಗ್ರೆಸ್ ಪಕ್ಷದ ಕಟ್ಟಾಳು ನೂರುದ್ದೀನ್ ಸಾಲ್ಮರ ರವರಿಗೆ, ಕಾಂಗ್ರೆಸ್ ಪಕ್ಷದಿಂದ, ಸರಕಾರಿ ನೇಮಕಾತಿಗಳಲ್ಲಿ ,ಸೂಕ್ತ ಸ್ಥಾನಮಾನ ನೀಡಬೇಕೆಂದು ಸಾಮಾಜಿಕ ಜಾಲತಾಣಗಳ ಮೂಲಕ, ಕಾಂಗ್ರೆಸ್ ಕಾರ್ಯಕರ್ತರ ಮತ್ತು ಅಹಿಂದ ನಾಯಕರ ಬಲವಾದ ಆಗ್ರಹ ವ್ಯಕ್ತವಾಗುತ್ತಿದೆ.
ಶ್ರೀ ನೂರುದ್ದೀನ್ ಸಾಲ್ಮರವರು, ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ, ನಾಯಕರಾಗಿ ಬೆಳೆದು ನಿಂತು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ವಕಪ್ ಸಮಿತಿ ಉಪಾಧ್ಯಕ್ಷರಾಗಿ, ಸದಸ್ಯರಾಗಿಯೂ ಕೆಲಸ ನಿರ್ವಹಿಸಿದ್ದರು.ಪ್ರಸ್ತುತ ಕೆಪಿಸಿಸಿಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು, ಚುನಾವಣಾ ಸಂದರ್ಭದಲ್ಲಿ, ಉಸ್ತುವಾರಿಯಾಗಿ ನೇಮಕಗೊಳ್ಳುವುದರ ಮೂಲಕ ಪಕ್ಷದ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನೊಂದವರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಜನಪರ ಕೆಲಸ ಕಾರ್ಯಗಳಿಂದಾಗಿ ಜಿಲ್ಲೆಯಲ್ಲಿ ಜನಪ್ರಿಯ ರಾಗಿರುತ್ತಾರೆ.
ಸ್ಪೀಕರ್ ಯುಟಿ ಖಾದರ್, ಮಾಜಿ ಸಚಿವರಾದ ರಮನಾಥ್ ರೈ, ವಿನಯ ಕುಮಾರ್ ಸೊರಕೆ, ಕರ್ನಾಟಕ ಸರಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ಮಸೂದ್, ಕಣಚೂರು ಮೆಡಿಕಲ್ ಕಾಲೇಜಿನ ಮುಖ್ಯಸ್ಥರು, ಹಿರಿಯ ಕಾಂಗ್ರೆಸ್ ಮುಖಂಡರು ಆದ ಕಣಚೂರು ಮೋನು ಹಾಜಿ,ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನೂರುದ್ದೀನ್ ರವರಿಗೆ, ಕಾಂಗ್ರೆಸ್ ಪಕ್ಷದ ವತಿಯಿಂದ ಸರಕಾರಿ ಮಟ್ಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಅಹಿಂದ ನಾಯಕರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಬಲವಾದ ಒತ್ತಡ ಕೇಳಿ ಬರುತ್ತಿದೆ.ಈ ನಿಟ್ಟಿನಲ್ಲಿ ಪಕ್ಷದ ನಾಯಕರು ಕೂಡಲೇ ಸ್ಪಂದಿಸಬೇಕೆಂದು, ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನಗಳು ಪ್ರಾರಂಭವಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.