(www.vknews. in) ಬಂಟ್ವಾಳ : ಕೆಎಸ್ಸಾರ್ಟಿಸಿ ಬಸ್ ಪಲ್ಟಿ, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರು.
ಬಂಟ್ವಾಳ : ಮಂಗಳೂರು- ಧರ್ಮಸ್ಥಳ ಮಧ್ಯೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ ಸಂಜೆ ವಗ್ಗ ಸಮೀಪದ ಕೊಪ್ಪಳದಲ್ಲಿ ನಡೆದಿದೆ.
ಘಟನೆಯಲ್ಲಿ ಬಸ್ಸು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಯುವಕರು ಬಸ್ಸಿನಿಂದ ಪ್ರಯಾಣಿಕರನ್ನು ಹೊರಗೆ ತೆಗೆಯಲು ಸಹಕರಿಸಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಬಸ್ಸು ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು , ಪಲ್ಟಿಯಾಗುವುದಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.