(www.vknews. in) ಹನೂರು : ತಾಲೂಕಿನ ಪ್ರಸಿದ್ಧ ಯಾತ್ರ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯವು ನಡೆದಿದ್ದು 1.64ಕೋಟಿ ರೂ ಹಣ ಸಂಗ್ರಹ.
ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಶ್ರೀ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಪ್ರಧಿಕಾರದ ಕಾರ್ಯದರ್ಶಿ ಎ ಇ ರಘು ರವರ ಸಮ್ಮುಖದಲ್ಲಿ ಬೆಳಿಗ್ಗೆ ಯಿಂದ ಸಂಜೆಯವರೆಗೂ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣದ ಪರ್ಕಾವಣೆ ಹಾಗೂ ಏಣಿಕೆ ಕಾರ್ಯ ಮಾಡಲಾಯಿತು.
ದಿ. 29.08.2024 ರಿಂದ 25.09.2024 ರವರೆಗೆ 28 ದಿನಗಳಲ್ಲಿ ಒಟ್ಟು ಮೊತ್ತ ರೂ.1,64,22,932 ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 21ಗ್ರಾಂ, 2ಕೆ.ಜಿ. 100 ಗ್ರಾಂ,ಬೆಳ್ಳಿ ಹುಂಡಿಯಲ್ಲಿ ದೊರೆತಿದೆ. ಅಮಾವಾಸ್ಯೆ, ರಜಾ ದಿನಗಳು ಸೇರಿದಂತೆ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಿದ್ದರಿಂದ ಹುಂಡಿಯಲ್ಲಿ 1.64 ಕೋಟಿ ರೂ ಹಣ ಸಂಗ್ರಹವಾಗಿದೆ.
ವಿದೇಶಿ ಕರೆನ್ಸಿಗಳು ಲಭ್ಯ : ನೇಪಾಳ ದ 1ನೋಟು, quater central bank bank one riyal ಒಂದು ನೋಟು ದೊರೆತಿದ್ದು, ಚಾಲ್ತಿಯಲ್ಲಿರದ 2000 ಮುಖಬೆಲೆಯ 12ನೋಟುಗಳು ಹುಂಡಿಯಲ್ಲಿ ಲಭ್ಯವಾಗಿದೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರು ಶ್ರೀ ನಾಗೇಶ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಕು. ಶ್ವೇತಾ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಬ್ಯಾಂಕ್ ಆಪ್ ಬರೋಡ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.