ಕೋಲಾರ (www.vknews.in): ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಲ್ಲಿ ಖಾಲಿಯಿರುವ ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಕೋಲಾರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಡಿಸೆಂಬರ್ 10 ರೊಳಗೆ ದಾಖಲಾತಿಗಳೊಂದಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 55 ವರ್ಷ. ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು.
ಕೋಲಾರ ಜಿಲ್ಲೆಯ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕ ಹುದ್ದೆಯಲ್ಲಿ ಆಗಸ್ಟ್ 07, 2017ರ ಪೂರ್ವದಲ್ಲಿ ನೇಮಕಾತಿ ಹೊಂದಿ ಪ್ರಸ್ತುತ ನೇರಪಾವತಿಯಡಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಈ ನಿಯಮಗಳು ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಆಯಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.