ನವದೆಹಲಿ (www.vknews.in) : ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ (ಎಡಿಆರ್) ಸ್ವಯಂಸೇವಾ ಸಂಸ್ಥೆ ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರ ಬಿಡುಗಡೆ ಮಾಡಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪೈಕಿ 3ನೇ ಸ್ಥಾನ ಪಡೆದಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ ಭಾರತದ ನಂ.1 ಧನಿಕ ಸಿಎಂ ಎನ್ನಿಸಿಕೊಂಡಿದ್ದಾರೆ. ಅರುಣಾಚಲ ಪ್ರದೇಶದ ಪೆಮಾ ಖಂಡು 332 ಕೋಟಿ ರು. ಆಸ್ತಿಯೊಂದಿಗೆ 2ನೇ ಹಾಗೂ 51 ಕೋಟಿ ರು. ಆಸ್ತಿಯೊಂದಿಗೆ ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ.
ಆದರೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ. ಆಸ್ತಿಯೊಂದಿಗೆ ‘ಅತ್ಯಂತ ಬಡವ ಸಿಎಂ’ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ (ಎನ್ಎನ್ಐ) 2023-2024ರಲ್ಲಿ ಸರಿಸುಮಾರು 1,85,854 ರೂ. ಆಗಿದ್ದರೆ, ಮುಖ್ಯ ಮಂತ್ರಿಗಳ ಸರಾಸರಿ ಸ್ವ-ಆದಾಯವು 13,64, 310 ರೂ. ಆಗಿದೆ. ಇದು ಭಾರತದ ಸರಾಸರಿ ತಲಾ ಆದಾಯಕ್ಕಿಂತ 7.3 ಪಟ್ಟು ಹೆಚ್ಚಿದೆ.
ಪ.ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ. ಆಸ್ತಿಯೊಂದಿಗೆ ‘ಅತ್ಯಂತ ಬಡವ ಸಿಎಂ’ ಆಗಿದ್ದರೆ, 55 ಲಕ್ಷ ರೂ. ಆಸ್ತಿ ಹೊಂದಿರುವ ಜಮ್ಮು- ಕಾಶ್ಮೀರ ಮುಖ್ಯಮಂತ್ರಿ ಒಮರ್ಅಬ್ದುಲ್ಲಾ ಅವರು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. 1 ಕೋಟಿ ರು. ಆಸ್ತಿಯೊಂದಿಗೆ ಕೇರಳದ ಪಿಣರಾಯಿ ವಿಜಯನ್ 3ನೇ ಸ್ಥಾನದಲ್ಲಿದ್ದಾರೆ.
13 (ಶೇ. 42ರಷ್ಟು) ಮುಖ್ಯಮಂತ್ರಿಗಳು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದರೆ, ಅವರಲ್ಲಿ 10 (ಶೇ.32) ಮಂದಿ ಕೊಲೆ ಯತ್ನ, ಅಪಹರಣ, ಲಂಚ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿಕೊಂಡಿದ್ದಾರೆ. 18 ಸಿಎಂಗಳ ಮೇಲೆ ಯಾವುದೇ ಕ್ರಿಮಿನಲ್ ಕೇಸಿಲ್ಲ. ದೇಶದ 31 ಮುಖ್ಯಮಂತ್ರಿಗಳ ಪೈಕಿ ಇಬ್ಬರು (ಪ.ಬಂಗಾಳದ ಮಮತಾ ಬ್ಯಾನರ್ಜಿ ಮತ್ತು ದೆಹಲಿಯ ಅತಿಶಿ) ಮಾತ್ರ ಇಬ್ಬರು ಮಹಿಳೆಯರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.