ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ತೀವ್ರ ಕುತೂಹಲ ಕೆರಳಿಸಿದ ಜಿದ್ದಾಜಿದ್ದಿನ ಕಣವಾಗಿದ್ದ ವೈ . ಹುಣಸೇನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಜಿ.ಎನ್.ಮುರಳಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದಾರೆ.
ಗ್ರಾಮ ಪಂಚಾಯಿತಿಯ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಜಿ.ಎನ್.ಮುರಳಿ ೯ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಅವರ ಪ್ರತಿಸ್ಪರ್ಧಿ ರವಿಕುಮಾರ್ ೮ ಮತಗಳು ಪಡೆದು ಪರಾಭವಗೊಂಡಿದ್ದಾರೆ.
ಒಟ್ಟು ೧೭ ಸದಸ್ಯರ ಬಲವನ್ನು ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತರು ೯ ಹಾಗೂ ಕಾಂಗ್ರೆಸ್ ಬೆಂಬಲಿತರು ೮ ಸ್ಥಾನಗಳಲ್ಲಿ ಗೆಲುವು ಸಾಧಿಸಿದರು.
ಪಂಚಾಯಿತಿ ಅಧ್ಯಕ್ಷರ ಚುನಾವಣೆಯಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಜೆಡಿಎಸ್ ಬೆಂಬಲಿತ ಸದಸ್ಯರೊಬ್ಬರು ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಆಕಾಂಕ್ಷಿ ಮುರಳಿ ಅವರನ್ನು ಬೆಂಬಲಿಸುವ ಮೂಲಕ ಪಂಚಾಯಿತಿಯ ಮೇಲೆ ಕಾಂಗ್ರೆಸ್ ವಿಜಯಪತಾಕೆ ಹಾರಿಸಲು ಸಹಕರಿಸಿದ್ದಾರೆ.
ವೈ.ಹುಣಸೇನಹಳ್ಳಿ ಗ್ರಾಪಂ ಮೇಲೆ ಜೆಡಿಎಸ್ ಪಕ್ಷದ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದಿದ್ದರು ಆದರೆ ಇಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್ ಪಕ್ಷದ ಬೆಂಬಲಿತ ಸದಸ್ಯರೊಬ್ಬರ ಸಹಕಾರದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಮುರಳಿ ಗೆಲುವು ಸಾಧಿಸಿ ಪಂಚಾಯಿತಿಯ ಮೇಲೆ ವಿಜಯ ಪತಾಕೆಯನ್ನು ಹಾರಿಸಿದ್ದಾರೆ.
ಪಂಚಾಯಿತಿ ಅಧ್ಯಕ್ಷರ ಚುನಾವಣೆಗೆ ವೇಳೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಡಿವೈಎಸ್ಪಿ ಪಿ.ಮುರಳಿಧರ್ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷ ಮುರುಳಿ ಮಾತನಾಡಿ ಗ್ರಾಮ ಪಂಚಾಯತ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಪಂಚಾಯತಿಯನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸುವುದೇ ನನ್ನ ಮುಖ್ಯ ಗುರಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗ್ರಾಪಂ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದರಿಂದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಕೆಎಂಎಫ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಜಿಪಂ ಮಾಜಿ ಸದಸ್ಯ ಎನ್.ಮುನಿಯಪ್ಪ, ವೈ ಹುಣಸೇನಹಳ್ಳಿ ಕಾಂಗ್ರೆಸ್ ಮುಖಂಡರಾದ ಕ್ಯಾತಪ್ಪ, ಶೇಗೆಹಳ್ಳಿ ಬಸವರಾಜ್, ಪಿಎಲ್ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ದೇವರಾಜ್, ಆಂಜಿನೇಯರೆಡ್ಡಿ, ಸಂತೋಷ, ಗೊರಮಡುಗು ಮಂಜುನಾಥ್, ಮುನಿರಾಜು(ದಾಮೋದರ್), ರಾಜಕುಮಾರ್, ಬಾಲಕೃಷ್ಣ, ಚೌಡಸಂದ್ರ ಮಹೇಶ್, ನಾಗನರಸಿಂಹ, ಮುತ್ತೂರು ವೆಂಕಟೇಶ್, ಆಶ್ರಯ ಬಡಾವಣೆ ರವಿ, ನರಸಿಂಹ (ಎನ್ಟಿಆರ್) ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.