ಹಾಸನ (www.vknews.in) : ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನನೊಂದು ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗ.
ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು.
ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.