ಕಲಬುರಗಿ (www.vknews.in) : ಸರ್ಕಾರದ ವತಿಯಿಂದ ನೀಡಲಾಗುವ ಮನೆ ನೀಡಿ ಎಂದು ಮನವಿ ಮಾಡಿದ ಮಹಿಳೆಯಲ್ಲಿ ನೀ ಬಾ, ಇಲ್ಲಾ ನಿನ್ನ ಮಗಳನ್ನು ಕಳುಹಿಸು ಎಂದು ಗ್ರಾಮ ಪಂಚಾಯತ್ ಸದಸ್ಯ ಓರ್ವ ಬೇಡಿಕೆ ಇಟ್ಟ ಘಟನೆ ನಡೆದಿದೆ.
ಸರ್ಕಾರದ ವತಿಯಿಂದ ನೀಡಲಾಗುವ ಮನೆ ನೀಡಿ ಎಂದು ಮಹಿಳೆಯೊಬ್ಬರು ಮನವಿ ಮಾಡಿದ್ದು, ಈ ವೇಳೆ ಗ್ರಾಮ ಪಂಚಾಯತ್ ಸದಸ್ಯ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಇಲ್ಲದಿದ್ದರೆ ಹಣದ ಬದಲು ನೀನು ಬಾ ಇಲ್ಲ ಅಥವಾ ನಿನ್ನ ಮಗಳನ್ನು ಕಳಿಸು ಎಂದು ಮಂಚಕ್ಕೆ ಕರೆದಿದ್ದಾನೆ.
ಗ್ರಾಮ ಪಂಚಾಯತ್ ಸದಸ್ಯ ಮನೆ ಮಾಡಿಸಿಕೊಡುತ್ತೇನೆ, ನನ್ನ ಜೊತೆ ಮಲಕೋ, ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನು ಕಳಿಸು ಎಂದಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಳಸಾಪುರ ಗ್ರಾಮದ ಮಹಿಳೆ ಮನೆ ಮಾಡಿಸಿಕೊಡಿ ಎಂದು ಗ್ರಾಮ ಪಂಚಾಯಿತಿ ಸದಸ್ಯನಿಗೆ ಮನವಿ ಮಾಡಿದ್ದಾಳೆ.
ಆಗ ಆತ ಪಂಚಾಯತಿಯಿಂದ ಮನೆ ಮಾಡಿಸಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಒಂದು ವೇಳೆ ದುಡ್ಡು ಕೊಡಲು ಆಗದಿದ್ದರೆ ನನ್ನ ಜೊತೆ ಮಲಗು ಎಂದು ಒತ್ತಾಯ ಮಾಡಿದ್ದಾನೆ. ಅಲ್ಲದೇ ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನ ಕಳುಹಿಸು ಎಂದಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ಈ ಸಂಬಂಧ ಮಹಿಳೆ ಗ್ರಾಮ ಪಂಚಾಯತಿ ಸದಸ್ಯನ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.