ಕೋಲಾರ(www.vknews.in): ಕೋಲಾರ ನಗರಸಭೆಯ ನೂತನ ಪೌರಾಯುಕ್ತರಾಗಿ ಜಿ. ನವೀನ್ ಚಂದ್ರ ಅವರು ಇಂದು ಅಧಿಕಾರ ವಹಿಸಿಕೊಂಡರು. ನಗರಸಭೆ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ತಮ್ಮ ಹೊಸ ಕರ್ತವ್ಯಕ್ಕೆ ಪಾದಾರ್ಪಣೆ ಮಾಡಿದರು. ಈ ಸಂದರ್ಭ ಶ್ರೀನಿವಾಸಪುರ ಪುರಸಭೆಯ ಮುಖ್ಯಾಧಿಕಾರಿ ವಿ. ನಾಗರಾಜು ಅವರು ಸಿಬ್ಬಂದಿಯೊಂದಿಗೆ ನೂತನ ಪೌರಾಯುಕ್ತರಿಗೆ ಶುಭಾಶಯಗಳನ್ನು ಕೋರಿ ಅಭಿನಂದನೆ ಸಲ್ಲಿಸಿದರು. ನಗರದ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೌಲಭ್ಯಗಳ ಸುಧಾರಣೆಯ ದೃಷ್ಟಿಯಿಂದ ನವೀನ್ ಚಂದ್ರ ಅವರ ನೇತೃತ್ವ ಫಲದಾಯಕವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಯಿತು.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ನವೀನ್ ಚಂದ್ರ, ನಗರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಸ್ವಚ್ಛತೆ, ಪೌರ ಸೇವೆಗಳ ಸುಧಾರಣೆ ಎಂಬುಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.