ಉಡುಪಿ (www.vknews.in) : ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಎಂದು ಹೇಳುವ ಚಕ್ರವರ್ತಿ ಸೂಲಿಬೆಲೆ ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತು, ಅವರು ಸುಳ್ಳಿನ ಚಕ್ರವರ್ತಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮದ ಆಯೋಜಕರಿಗೆ ಪೊಲೀಸರು ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ಸೂಲಿಬೆಲೆ ನಿಸ್ಸೀಮರು ಎಂದರು.
ನಾವು ಸೂಲಿಬೆಲೆಯಿಂದ ಪಾಠ ಕೇಳಬೇಕಾಗಿಲ್ಲ. ಅವರು ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಅವರು ತಮ್ಮ ಪ್ರವಾಸ ಮಾಡಬಹುದು. ಆದರೆ ದ್ವೇಷ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.