ವಾಷಿಂಗ್ಟನ್ (www.vknews.in) : 2026ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ಪಾಕಿಸ್ತಾನ ಸಂಸತ್ತು ನಾಮನಿರ್ದೇಶನ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟಿನ ಸಂದರ್ಭದಲ್ಲಿ ನಿರ್ಣಾಯಕ ರಾಜತಾಂತ್ರಿಕ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಟ್ರಂಪ್ ಅವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ಡೊನಾಲ್ಡ್ ಟ್ರಂಪ್ ಅವರು ಶುಕ್ರವಾರ ಟ್ರುತ್ ಸೋಷಿಯಲ್ ಪೋಸ್ಟ್ನಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಗೆ ಪಾಕ್ ಸರ್ಕಾರ ಶಿಫಾರಸು ಮಾಡಿದೆ.
‘ನಾನು ನಾಲ್ಕು ಅಥವಾ ಐದು ಬಾರಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆಯಬೇಕಿತ್ತು. ಆದರೆ, ಯಾರು ಕೂಡ ನನಗೆ ಪ್ರಶಸ್ತಿಯನ್ನು ನೀಡುವುದಿಲ್ಲ. ಏಕೆಂದರೆ ಅದನ್ನು ಉದಾರವಾದಿಗಳಿಗೆ ಮಾತ್ರ ನೀಡುತ್ತಾರೆ’ ಎಂದು ಟ್ರಂಪ್ ಹೇಳಿಕೊಂಡಿದ್ದರು.
‘ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಅಥವಾ ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸಂಘರ್ಷಗಳಲ್ಲಿ ಶಾಂತಿ ಮಾತುಕತೆ ಮೂಲಕ ಶಮನ ಮಾಡಿಕೊಳ್ಳಲು ಸಲಹೆ ನೀಡಿದ್ದೆ. ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ’ ಎಂದು ಟ್ರಂಪ್ ಹೇಳಿದ್ದರು.
ಕಾಂಗೊ ಮತ್ತು ರುವಾಂಡಾ ನಡುವಿನ ಸಂಘರ್ಷ ಸಂಬಂಧ ಎರಡು ದೇಶಗಳ ನಡುವೆ ಒಪ್ಪಂದವನ್ನು ಏರ್ಷಡಿಸಿದ್ದೇನೆ. ರುವಾಂಡಾ ಮತ್ತು ಕಾಂಗೊದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್ಗೆ ಆಗಮಿಸಲಿದ್ದಾರೆ. ಒಪ್ಪಂದ ಸಂಬಂಧ ದಾಖಲೆಗಳಿಗೆ ಸಹಿ ಹಾಕಲಿದ್ದಾರೆ. ಈ ಮೂಲಕ ಆಫ್ರಿಕಾಕ್ಕೆ ಶ್ರೇಷ್ಠ ದಿನ ಮತ್ತು ಜಗತ್ತಿಗೂ ಉತ್ತಮ ದಿನವಾಗಲಿದೆ ಎಂದು ಟ್ರಂಪ್ ಹೇಳಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.