ಶಿಡ್ಲಘಟ್ಟ(vknews.in): ರಾಜ್ಯದಲ್ಲಿ ಆಡಳಿತಾತ್ಮಕ ವರ್ಗಾವಣೆಗಳು ಮತ್ತೆ ಗರಿಗೆದರಿದ್ದು, ಶಿಡ್ಲಘಟ್ಟ ತಾಲ್ಲೂಕಿನ ತಹಶೀಲ್ದಾರ್ (ಗ್ರೇಡ್-1) ಹುದ್ದೆಗೆ ಕುಮಾರಿ ಗಗನ ಸಿಂಧು ಎನ್. ಅವರನ್ನು ನೇಮಕ ಮಾಡುವಂತೆ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯಪಾಲರ ಆದೇಶದಂತೆ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ ಹೆಚ್.ಜಿ. ಅವರಿಂದ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ.
ವಿಡಿಯೋ ವೀಕ್ಷಿಸಿ
ಈ ಮೊದಲು ಗಗನ ಸಿಂಧು ಎನ್. ಅವರು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಹಶೀಲ್ದಾರ್ (ಗ್ರೇಡ್-2) ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ನಿರ್ವಹಣಾ ಸಾಮರ್ಥ್ಯ ಮತ್ತು ಆಡಳಿತ ಕ್ಷಮತೆಗೆ ಪ್ರಾಶಸ್ತ್ಯ ನೀಡಿ, ಶಿಡ್ಲಘಟ್ಟ ತಾಲ್ಲೂಕಿಗೆ ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.
ಇದರೊಂದಿಗೆ, ಶಿಡ್ಲಘಟ್ಟ ತಾಲ್ಲೂಕಿನಲ್ಲಿ ತಹಶೀಲ್ದಾರ್ ಆಗಿದ್ದ ಬಿ.ಎನ್. ಸ್ವಾಮಿ, ಕಳೆದ ಎರಡು ವರ್ಷಗಳಿಂದ ಶಿಡ್ಲಘಟ್ಟದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು, ಇದೀಗ ಅವರನ್ನು ಬೆಂಗಳೂರಿನ ಕಂದಾಯ ಆಯುಕ್ತಾಲಯದ ಕಂದಾಯ ಗ್ರಾಮಗಳ ರಚನಾ ಕೋಶದ ತಹಶೀಲ್ದಾರ್ (ಗ್ರೇಡ್-2) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರ ಸೇವೆಯನ್ನು ಅಧಿಕಾರಿಗಳು ಮೆಚ್ಚುಗೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.
ಹೊಸ ಅಧಿಕಾರಿಗಳ ನೇಮಕದಿಂದ ತಾಲ್ಲೂಕಿನ ವಿವಿಧ ಕಂದಾಯ ಸಂಬಂಧಿತ ಕಾರ್ಯಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ತಕ್ಷಣದಿಂದಲೇ ಈ ವರ್ಗಾವಣೆ ಜಾರಿಗೆ ಬರಲಿದ್ದು, ಸಂಬಂಧಿತ ಇಲಾಖೆಗಳು ಮತ್ತು ಅಧಿಕಾರಿಗಳಿಗೆ ಆದೇಶದ ಪ್ರತಿಯನ್ನು ಕಳುಹಿಸಲಾಗಿದೆ ಎಂದು ಮೂಲಗಳು ವಿವರಿಸಿವೆ.
ಸ್ಥಳೀಯ ಜನತೆಯ ನಿರೀಕ್ಷೆ: ಹೊಸ ತಹಶೀಲ್ದಾರ್ ಅಧಿಕಾರ ಸ್ವೀಕರಿಸಿದ ಬಳಿಕ ತಾಲ್ಲೂಕಿನಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ, ಕಂದಾಯ ವಿವಾದಗಳ ಸೂಕ್ತ ನಿಭಾವಣೆ, ರೈತ ಹಿತಾಸಕ್ತಿ ಕಾಯ್ದುಕೊಳ್ಳುವಲ್ಲಿ ನಿರ್ಧಾರಾತ್ಮಕ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಭರವಸೆ ವ್ಯಕ್ತವಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.