(www.vknews.in) : ನಿರೂಪಕಿಯಾಗಿ ಮತ್ತು ಪತ್ರಕರ್ತೆಯಾಗಿ ತೆಲುಗು ಮಾಧ್ಯಮದಲ್ಲಿ ಕಳೆದ 18 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಟಿ ನ್ಯೂಸ್(T News) ಚಾನೆಲ್ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ನಿರೂಪಕಿಯ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ಶ್ವೇಚ್ಛಾ ತನ್ನ ತಾಯಿ ಶ್ರೀದೇವಿ ಅವರೊಂದಿಗೆ ರಾಮ್ ನಗರದಲ್ಲಿ ವಾಸಿಸುತ್ತಿದ್ದರು. ಆದಾಗ್ಯೂ, ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಶ್ವೇಚ್ಛಾ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವು ಗಂಟೆಗಳ ಮೊದಲು, ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಬುದ್ಧನ ಉಲ್ಲೇಖವನ್ನು ಕ್ಯಾಪ್ಷನ್ ಬರೆದುಕೊಂಡಿದ್ದಾರೆ. “ಮನಸ್ಸು ಶಾಂತವಾಗಿದ್ದರೆ, ಆತ್ಮ ಮಾತನಾಡುತ್ತದೆ” ಎಂದು ಅವರು ಬರೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.