ಚಿಕ್ಕಮಗಳೂರು (www.vknews.in) ; ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ಮಗ ಕುಡಿದ ಮತ್ತಿನಲ್ಲಿ ತಾಯಿಯನ್ನು ಬೆಂಕಿ ಹಚ್ಚಿ ಕೊಂದು, ಮೃತದೇಹದ ಪಕ್ಕದಲ್ಲೇ ಮಲಗಿದ್ದ ಹೃದಯವಿದ್ರಾವಕ ಘಟನೆ ನಡೆದಿದೆ.
ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ ಪವನ್ ಕಳೆದ ರಾತ್ರಿ ತಾಯಿಯನ್ನು ಬೆಂಕಿ ಹಚ್ಚಿ ಕೊಂದು ಹಾಕಿದ್ದಾನೆ. ಬಳಿಕ ತಾಯಿ ಮೃತದೇಹ ಬೆಂಕಿಯಲ್ಲಿ ಬೇಯುತ್ತಿದ್ದರೆ ಕೊಲೆಗಾರ ಮಗ ಪ್ರಜ್ಞೆ ಇಲ್ಲದವನಂತೆ ಅಲ್ಲೇ ಪಕ್ಕದಲ್ಲಿ ಮಲಗಿದ್ದಾನೆ.
ತಾಯಿ ಭವಾನಿ ಮೃತದೇಹ ಬಹುತೇಕ ಸುಟ್ಟುಹೋಗಿದ್ದು ಕಾಲು ಹಾಗೂ ಕೈ ಮಾತ್ರ ಉಳಿದಿದೆ. ಅಕ್ಕಪಕ್ಕದವರಿಂದ ವಿಷಯ ತಿಳಿದು ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಾಯಿಯನ್ನು ಕೊಂದ ಪುತ್ರನನ್ನು ಆಲ್ದೂರು ಪೊಲೀಸರು ಬಂಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.