ಭೋಪಾಲ್ (www.vknews.in): 27 ವರ್ಷದ ಮಾಡೆಲ್ ಖುಷ್ಬೂ ಅಹಿರ್ವಾರ್ ನಿಗೂಢವಾಗಿ ಸಾವನ್ನಪ್ಪಿದ್ದು, ಆಕೆಯ ಬಾಯ್ಫ್ರೆಂಡ್ ಆಕೆಯನ್ನು ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದಾನೆಂದು ಹೇಳಲಾಗಿದೆ. ಆಕೆಯ ಸಾವಿನ ಬಳಿಕ ಆತ ನಾಪತ್ತೆಯಾಗಿದ್ದಾನೆ.
ಸೆಹೋರ್ ಜಿಲ್ಲೆಯ ಭೈನ್ಸಖೇಡಿ ಆಸ್ಪತ್ರೆಯ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಟುಂಬದ ಮನವಿಯ ಮೇರೆಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭೋಪಾಲ್ನ ಗಾಂಧಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಮೃತ ಯುವತಿಯ ತಾಯಿ ಲಕ್ಷ್ಮಿ ಅಹಿರ್ವಾರ್ ಆಸ್ಪತ್ರೆಯ ಹೊರಗೆ ದುಃಖ ವ್ಯಕ್ತಪಡಿಸಿದ್ದಾರೆ. ಆಕೆಯ ದೇಹದಾದ್ಯಂತ ನೀಲಿ ಗುರುತುಗಳಿವೆ. ಆಕೆಯ ಮುಖ ಊದಿಕೊಂಡಿದೆ. ಆಕೆಯ ಖಾಸಗಿ ಭಾಗಗಳಿಗೆ ಗಾಯಗಳಾಗಿವೆ. ನನ್ನ ಮಗಳನ್ನು ಕ್ರೂರವಾಗಿ ಥಳಿಸಿ ಕೊಲ್ಲಲಾಗಿದೆ. ನಮಗೆ ನ್ಯಾಯ ಬೇಕು. ಆಕೆಯನ್ನು ಕೊಂದವರಿಗೆ ಶಿಕ್ಷೆಯಾಗಬೇಕು” ಎಂದು ಅವರು ಆರೋಪಿಸಿದ್ದಾರೆ.
ಕುಟುಂಬದ ಪ್ರಕಾರ, ಆ ಯುವತಿ ಖಾಸಿಮ್ ಎಂಬ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದಳು. ಆಕೆಯನ್ನು ಆಸ್ಪತ್ರೆಗೆ ಸೇರಿಸಿದಾಗಿನಿಂದ ಆತ ಕಾಣೆಯಾಗಿದ್ದಾನೆ. ಆತನೇ ಆಕೆಯನ್ನು ಉಜ್ಜಯಿನಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ಭೋಪಾಲ್ಗೆ ಹಿಂತಿರುಗುತ್ತಿದ್ದಾಗ ಖುಷ್ಬೂ ಸ್ಥಿತಿ ಹದಗೆಟ್ಟಿತು. ಆಕೆ ಪ್ರಜ್ಞಾಹೀನಳಾಗಿರುವುದನ್ನು ನೋಡಿ ಆಕೆಯನ್ನು ಆಸ್ಪತ್ರೆಗೆ ಸೇರಿಸಿ ಖಾಸಿಮ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಿಮ್ ಮತ್ತು ಅವರ ಕೆಲವು ಸ್ನೇಹಿತರು ಆಕೆಯನ್ನು ಹೊಡೆದಿದ್ದಾರೆ, ಆಕೆಯ ಕುತ್ತಿಗೆಯ ಮೇಲೆ ಗಾಯಗಳಾಗಿವೆ. ಆಕೆಯ ದೇಹದಾದ್ಯಂತ ನೀಲಿ ಮತ್ತು ಹಸಿರು ಗುರುತುಗಳಿವೆ ಎಂದು ಖುಷ್ಬೂ ಅವರ ಕುಟುಂಬ ಆರೋಪಿಸಿದೆ. ಆರೋಪಿಯು ಖುಷ್ಬೂ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದನು ಎಂದು ಕೂಡ ಅವರು ಆರೋಪಿಸಿದ್ದಾರೆ. ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.