ಲಕ್ನೋ (www.vknews.in) | ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ಮಸೀದಿ ಧ್ವಂಸಕ್ಕೆ ಅಲಹಾಬಾದ್ ಹೈಕೋರ್ಟ್ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ಫತೇಪುರ್ ಜಿಲ್ಲೆಯ 180 ವರ್ಷಗಳಷ್ಟು ಹಳೆಯದಾದ ನೂರಿ ಮಸೀದಿ ಧ್ವಂಸ ಕಾರ್ಯವನ್ನು ನಿಲ್ಲಿಸಲಾಗಿದೆ. ನೂರಿ ಜಾಮಾ ಮಸೀದಿಯ ವ್ಯವಸ್ಥಾಪಕ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಮತ್ತು ನ್ಯಾಯಮೂರ್ತಿ ಅರುಣ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಮಸೀದಿಯನ್ನು ಕೆಡವಲು ನೋಟಿಸ್ ಬಂದಿದ್ದು, ಈಗಾಗಲೇ ಮಸೀದಿಯ ಒಂದು ಭಾಗವನ್ನು ನೆಲಸಮ ಮಾಡಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಮುಂದಿನ ಬಾರಿ ಪ್ರಕರಣವನ್ನು ಪರಿಗಣಿಸುವವರೆಗೆ ಹೆಚ್ಚಿನ ಉರುಳಿಸುವಿಕೆ ಪ್ರಕ್ರಿಯೆಗಳು ಇರುವುದಿಲ್ಲ ಎಂದು ರಾಜ್ಯ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದರು. ಇದನ್ನು ದಾಖಲಿಸಿದ ನ್ಯಾಯಾಲಯ, ನೆಲಸಮ ಪ್ರಕ್ರಿಯೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸುವಂತೆ ನಿರ್ದೇಶಿಸಿದೆ.
ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದ ಲೋಕೋಪಯೋಗಿ ಕಾಮಗಾರಿಗಳಿಗೆ ನೆಲಸಮ ಕ್ರಮದ ಅಗತ್ಯವಿದೆ ಎಂದು ರಾಜ್ಯ ಮಂಡಳಿ ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು. ರಸ್ತೆ ಅಗಲೀಕರಣ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಆದಾಗ್ಯೂ, ಮಸೀದಿ ಆಡಳಿತ ಮಂಡಳಿಯ ವಕೀಲರು ಅಗಲೀಕರಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ ಮತ್ತು ಮುಂದಿನ ವಿಚಾರಣೆಯವರೆಗೆ ರಕ್ಷಣೆ ನೀಡದಿದ್ದರೆ ಮಸೀದಿಯನ್ನು ನೆಲಸಮಗೊಳಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ರಸ್ತೆ ಅಗಲೀಕರಣದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣವನ್ನು ನವೆಂಬರ್ 17 ರಂದು ತುರ್ತು ಪರಿಗಣನೆಗಾಗಿ ಪಟ್ಟಿಯಲ್ಲಿ ಸೇರಿಸುವಂತೆ ನ್ಯಾಯಾಲಯ ಆದೇಶಿಸಿತು. ನೂರಿ ಜಾಮಾ ಮಸೀದಿಯ ಒಂದು ಭಾಗವನ್ನು ಒತ್ತುವರಿ ಆರೋಪದ ಮೇಲೆ 2024 ರ ಡಿಸೆಂಬರ್ನಲ್ಲಿ ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಯಿತು. ಆಗಲೂ ಮಸೀದಿ ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿದ್ದರೂ ನ್ಯಾಯಾಲಯ ಸಮಯಕ್ಕೆ ಸರಿಯಾಗಿ ಮಧ್ಯಪ್ರವೇಶಿಸಲಿಲ್ಲ. ನಂತರ ಸಮಿತಿಯು ಹೊಸ ಅರ್ಜಿಯೊಂದಿಗೆ ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.