ಫರಿದಾಬಾದ್ (www.vknews.in) | ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ಮಾಡಲು ಸಂಚು ರೂಪಿಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ ವ್ಯಕ್ತಿಯನ್ನು ಜೈಲಿನಲ್ಲಿ ಸಹ ಕೈದಿಯೊಬ್ಬರು ಹತ್ಯೆ ಮಾಡಿದ್ದಾರೆ. ಮೃತರನ್ನು ಅಬ್ದುಲ್ ರೆಹಮಾನ್ (20) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸಹಕೈದಿ ಅರುಣ್ ಚೌಧರಿ ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಕಳೆದ ರಾತ್ರಿ ಫರಿದಾಬಾದ್ ಜೈಲಿನಲ್ಲಿ ಈ ಘಟನೆ ನಡೆದಿದೆ.
ಅಬ್ದುಲ್ ರೆಹಮಾನ್ ಅವರನ್ನು ಮಂಗಳವಾರ ಕಾಶ್ಮೀರದ ನೀಮ್ಕಾ ಜೈಲಿನಿಂದ ಫರಿದಾಬಾದ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿದ ನಂತರ ಶವವನ್ನು ಕಾಶ್ಮೀರಕ್ಕೆ ಕೊಂಡೊಯ್ಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಆಗಸ್ಟ್ನಲ್ಲಿ ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ಮಾಡಲು ಸಂಚು ರೂಪಿಸಿದ ಆರೋಪದ ಮೇಲೆ ಅಬ್ದುಲ್ ರೆಹಮಾನ್ ಅವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ತನ್ನ ಮಗನನ್ನು ಉದ್ದೇಶಪೂರ್ವಕವಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಅಬ್ದುಲ್ ರಹಮಾನ್ ತಾಯಿ ಆರೋಪಿಸಿದ್ದಾರೆ. ಘಟನೆಯಲ್ಲಿ ಜೈಲು ಅಧಿಕಾರಿಗಳ ಕಡೆಯಿಂದ ಲೋಪಗಳ ಬಗ್ಗೆ ತನಿಖೆ ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.