ಬೆಂಗಳೂರು (www.vknews.in) | ಬೆಂಗಳೂರಿನ ಥಣಿಸಂದ್ರದಲ್ಲಿ ಶಾಲಾ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಹಾಲು ಖರೀದಿಸಲು ಬೈಕ್ ನಲ್ಲಿ ಹೊರಟಿದ್ದ ಪೊಲೀಸ್ ಕಾನ್ ಸ್ಟೆಬಲ್ ನಾಗನಗೌಡ ಅವರ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಶಾಲಾ ಬಸ್ ಡಿಕ್ಕಿ ಹೊಡೆದಿದೆ.
ಬೈಕ್ ಸವಾರಿ ಮಾಡುತ್ತಿದ್ದ ನಾಗನಗೌಡ ಹಾಗೂ ಇಬ್ಬರು ಮಕ್ಕಳು ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ. ಮಕ್ಕಳು ಬಸ್ ನ ಟೈರ್ ಗೆ ಸಿಲುಕಿದ್ದರು. ತಲೆಗೆ ಗಂಭೀರ ಪೆಟ್ಟಾಗಿದ್ದು, ಎರಡು ಮತ್ತು ನಾಲ್ಕು ವರ್ಷದ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರಿ ಮಾಡುತ್ತಿದ್ದ ನಾಗನಗೌಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮೃತರನ್ನು ಕಾನ್ ಸ್ಟೆಬಲ್ ನಾಗನಗೌಡ ಅವರ ಪುತ್ರಿ ವರ್ಷಾ (2) ಮತ್ತು ಸಹೋದರನ ಮಗಳು ಭಾನು (4) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶಾಲಾ ಬಸ್ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬುದು ಪ್ರಾಥಮಿಕ ತೀರ್ಮಾನವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.