ಟೆಹ್ರಾನ್ (www.vknews.in) | ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯದಲ್ಲಿ . ಇರಾನ್ ರಾಜಧಾನಿ ಟೆಹ್ರಾನ್ನಲ್ಲಿ ಭಾರಿ ಸ್ಫೋಟಗಳ ದೃಶ್ಯಗಳು ಹೊರಬಿದ್ದಿವೆ. ನಗರದ ವಿವಿಧ ಭಾಗಗಳಲ್ಲಿ ಜೋರಾಗಿ ಸ್ಫೋಟಗಳ ಶಬ್ದಗಳು ಕೇಳಿಬಂದಿವೆ ಎಂದು ವರದಿಗಳು ತಿಳಿಸಿವೆ.
ಇರಾನ್ ಮೇಲಿನ ದಾಳಿ ಮುನ್ನೆಚ್ಚರಿಕೆ ಕ್ರಮವಾಗಿತ್ತು ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ. ಇರಾನ್ ಅಧ್ಯಕ್ಷೀಯ ಸಂಕೀರ್ಣವನ್ನು ಸಹ ದಾಳಿ ಗುರಿಯಾಗಿರಿಸಿಕೊಂಡಿದೆ ಎಂದು ವರದಿಗಳಿವೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ದಾಳಿಗೆ ಇರಾನ್ ಇನ್ನೂ ಪ್ರತಿಕ್ರಿಯಿಸಿಲ್ಲ. ಇಸ್ರೇಲ್ ತುರ್ತು ಪರಿಸ್ಥಿತಿ ಘೋಷಿಸಿದೆ. ದಾಳಿಯ ನಂತರ ಇಸ್ರೇಲ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಮುಂದಿನ ಸೂಚನೆ ಬರುವವರೆಗೂ ವಿಮಾನ ನಿಲ್ದಾಣಕ್ಕೆ ಬರದಂತೆ ಇಸ್ರೇಲ್ ಸಾರಿಗೆ ಸಚಿವಾಲಯ ಸಾರ್ವಜನಿಕರಿಗೆ ಸೂಚಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.