ನವದೆಹಲಿ (www.vknews.in) : ಯುನೈಟೆಡ್ ಸ್ಟೇಟ್ಸ್ (ಯುಎಸ್) ಮತ್ತು ಇಸ್ರೇಲ್ ದೇಶಗಳು ಇರಾನ್ ಮೇಲೆ ಜಂಟಿಯಾಗಿ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಎರಡೂ ಕಡೆಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಬಗೆಹರಿಸಲು ‘ಮಾತುಕತೆ ಮತ್ತು ರಾಜತಾಂತ್ರಿಕತೆ’ಗೆ ಭಾರತ ಕರೆ ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರದೇಶದಲ್ಲಿನ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿನ ಎಲ್ಲಾ ಭಾರತೀಯ ಪ್ರಜೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿವೆ. ಅವರು ಜಾಗರೂಕರಾಗಿರಲು ಸೂಚಿಸಲಾಗಿದೆ. ಭಾರತೀಯ ನಾಗರಿಕರು ಸ್ಥಳೀಯ ಭದ್ರತಾ ಮಾರ್ಗದರ್ಶನವನ್ನು ಅನುಸರಿಸಬೇಕು ಮತ್ತು ರಾಯಭಾರ ಕಚೇರಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಅವರು ಹೇಳಿದ್ದಾರೆ.
“ಸಂಘರ್ಷಕ್ಕೊಳಗಾದ ಎಲ್ಲ ಕಡೆಯವರು ಸಂಯಮದಿಂದ ವರ್ತಿಸಬೇಕು, ಪರಿಸ್ಥಿತಿ ಉಲ್ಬಣಗೊಳ್ಳದಂತೆ ನೋಡಿಕೊಳ್ಳಬೇಕು ಮತ್ತು ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು” ಎಂದು ಜೈಸ್ವಾಲ್ ಹೇಳಿದ್ದಾರೆ. ಇಸ್ರೇಲ್-ಇರಾನ್-ಅಮೆರಿಕದ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಅನುಸರಿಸಬೇಕು. ಎಲ್ಲಾ ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಜೈಸ್ವಾಲ್ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.