(www.vknews.in) : ಇರಾನ್ ಸರ್ವೋಚ್ಛ ನಾಯಕ ಅಲಿ ಖಮೇನಿ ಅವರ ಹತ್ಯೆಯ ಘಟನೆ ವಿಶ್ವದ ಶಾಂತಿ ಮತ್ತು ಸ್ಥಿರತೆಗೆ ಭಾರೀ ಆಘಾತ ಉಂಟುಮಾಡಿದ ದುರಂತವಾಗಿದೆ. ಇಂತಹ ಕ್ರೂರ ಕೃತ್ಯವು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಹಾಗೂ ಮಾನವೀಯತೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿದೆ.
ಹಿಂಸಾಚಾರ ಯಾವತ್ತೂ ಸಮಸ್ಯೆಗಳ ಪರಿಹಾರವಾಗುವುದಿಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳು ಸಂವಾದ, ಸಹಿಷ್ಣುತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕವೇ ಪರಿಹಾರ ಕಂಡುಕೊಳ್ಳಬೇಕು. ಇಂತಹ ಘಟನೆಗಳು ಜಾಗತಿಕ ಮಟ್ಟದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಎಲ್ಲಾ ರಾಷ್ಟ್ರಗಳು ಸಂಯಮ ಮತ್ತು ಜವಾಬ್ದಾರಿಯುತ ನಡೆ ತಾಳುವುದು ಅತ್ಯಂತ ಅಗತ್ಯವಾಗಿದೆ.
ವಿಶ್ವ ಸಮುದಾಯವು ಶಾಂತಿ, ಸಹಕಾರ ಹಾಗೂ ಮಾನವೀಯ ಮೌಲ್ಯಗಳ ರಕ್ಷಣೆಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಸೇವಾದಳ ಘಟಕ ಕಾರ್ಯದರ್ಶಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.