ಕೋಲಾರ(www.vknews.in) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೋಲಾರ ಜಿಲ್ಲೆಯ ವಿದ್ಯಾರ್ಥಿನಿ ಜೋಯಾ ಜೀನತ್ ಅವರು 579 ಅಂಕಗಳನ್ನು ಗಳಿಸಿ 96.50 ಶೇಕಡಾ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ತೋರಿದ ಅವರು, ಮಹಿಳಾ ಸಮಾಜ ಪಿಯು ಕಾಲೇಜಿನ ಹೆಮ್ಮೆಯ ವಿದ್ಯಾರ್ಥಿನಿಯಾಗಿದ್ದಾರೆ. ಜೋಯಾ ಜೀನತ್ ಅವರು ಡೈಲಿ ಸಲಾರ್ ಪತ್ರಿಕೆಯ ಸಯ್ಯದ್ ತಬ್ರೇಜ್ ಹಾಗೂ ಅರ್ಶಿಯಾ ಅಂಜುಮ್ ದಂಪತಿಯ ಪುತ್ರಿಯಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಸದಾ ಪರಿಶ್ರಮ ಮತ್ತು ಏಕಾಗ್ರತೆಯನ್ನು ಕಾಪಾಡಿಕೊಂಡು ಬಂದಿರುವ ಅವರು, ಈ ಸಾಧನೆಯ ಮೂಲಕ ಕಾಲೇಜು ಹಾಗೂ ಜಿಲ್ಲೆಯ ಗೌರವವನ್ನು ಹೆಚ್ಚಿಸಿದ್ದಾರೆ. ತಮ್ಮ ಯಶಸ್ಸಿಗೆ ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಪ್ರೋತ್ಸಾಹವೇ ಮುಖ್ಯ ಕಾರಣವೆಂದು ಜೋಯಾ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ಉತ್ತಮ ವೃತ್ತಿ ಜೀವನ ಕಟ್ಟಿಕೊಳ್ಳುವ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಈ ಸಾಧನೆಗೆ ಸಂಬಂಧಿಕರು, ಸ್ನೇಹಿತರು ಮತ್ತು ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.