ಬಳ್ಳಾರಿ (www.vknews.in) : ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಹರಾಳು ಗ್ರಾಮದ ಎನ್.ವಿಶಾಲಾಕ್ಷಿ ಐಸ್ಕ್ರೀಮ್ ಅಂಗಡಿ ತೆರೆದು, ಸ್ವಾವಲಂಬಿ ಬದುಕು ಕಟ್ಟಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾದ ಮಹಿಳೆ..
ಮಧ್ಯಮ ವರ್ಗದ ಕುಟುಂಬದ ವಿಶಾಲಾಕ್ಷಿ ನಿತ್ಯ ಕೂಲಿ ಕೆಲಸ ಮಾಡುತ್ತಿದ್ದರು. ಆದರೆ, ಪ್ರತಿ ತಿಂಗಳು 2,000 ರೂ.ನಂತೆ ಬರುವ ಗೃಹಲಕ್ಷ್ಮೀ ಹಣ ಕೂಡಿಟ್ಟು ಐಸ್ಕ್ರೀಂ ಅಂಗಡಿ ಓಪನ್ ಮಾಡಿದ್ದಾರೆ. ಕೊಟ್ಟೂರಿನ ಕಿಶನ್ ಎಂಟರ್ಪ್ರೈಸ್ ವಿತರಕರಿಂದ ಚಾಕೋಬಾರ್, ಐಸ್ ಕ್ಯಾಂಡಿ, ಕುಲ್ಫಿ ಐಸ್, ಕೋನ್ ಐಸ್, ಕಪ್ ಐಸ್ ಇನ್ನಿತರೆ ಎಲ್ಲಾ ತರಹದ ಐಸ್ಕ್ರೀಮ್ ಉತ್ಪನ್ನಗಳನ್ನು ನೇರವಾಗಿ ಪಡೆದು ಮಾರಾಟ ಮಾಡುತ್ತಿದ್ದಾರೆ. ಹೊಸದಾಗಿ ಅಂಗಡಿ ಆರಂಭಿಸಿರುವ ವಿಶಾಲಾಕ್ಷಿಯ ಅಂಗಡಿಗೆ ಗ್ರಾಹಕರು ಲಗ್ಗೆ ಇಟ್ಟು ಐಸ್ಕ್ರೀಂ ಖರೀದಿ ಮಾಡ್ತಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ ಬಿಸಿಲಿನ ತಾಪಮಾನ ವಿಪರೀತವಾಗಿದೆ. ಬಿಸಿಲಿಗೆ ತತ್ತರಿಸಿರುವ ಜನರು, ಐಸ್ಕ್ರೀಂ ಸೇರಿದಂತೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಐಸ್ಕ್ರೀಂ ಅಂಗಡಿ ಆರಂಭಿಸಿರುವ ವಿಶಾಲಾಕ್ಷಿ ಅವರು ತಂಪುಪಾನೀಯಗಳನ್ನೂ ಇಟ್ಟುರುವುದರಿಂದ ಮಕ್ಕಳು, ಹಿರಿಯರು ಸೇರಿದಂತೆ ಎಲ್ಲರೂ ಖರೀದಿಗೆ ಮುಂದಾಗುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.