ಬೆಂಗಳೂರು (www.vknews.in) : 2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಏಪ್ರಿಲ್ 23ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ.
ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.
ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಮೊದಲ ಬಾರಿಗೆ ಡಿಜಿ ಲಾಕರ್ನಲ್ಲಿ ಅಂಕಪಟ್ಟಿಯಲ್ಲಿ ಲಭ್ಯವಾಗಲಿವೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್ಎಸ್ಎಲ್ಸಿಯಲ್ಲಿ ಶೇ.94.1 ಮಂದಿ ಪಾಸ್ ಆಗಿದ್ದಾರೆ. ಈ ಮೂಲಕ ಶೇ.94.01ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷ 80.04ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಈ ಬಾರಿ ಶೇ.14ರಷ್ಟು ಫಲಿತಾಂಶ ಪ್ರಮಾಣ ಹೆಚ್ಚಳವಾಗಿದೆ ಎಂದು ಸಚಿವರು ಹೇಳಿದರು.
ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ಅಥಣಿ ತಾಲೂಕಿನ ಕಟಗೇರಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಪಾಟೀಲ್, ದಾವಣಗೆರೆಯ ಚನ್ನಗಿರಿ ತಾಲೂಕಿನ ಕಬ್ಬಾಳ ಶ್ರೀವಿದ್ಯಾಲಕ್ಷ್ಮೀ ಹೈಸ್ಕೂಲ್ನ ಭರತ್ ಜಿ, ಚಿಕ್ಕಮಗಳೂರು ತಾಲೂಕಿನ ಸೇಂಟ್ ಮೇರಿ ಹೈಸ್ಕೂಲ್ನ ಬೃಂದಾ ಎಂ ತಾಪ್ಸೆ, ಬೆಂಗಳೂರು ಉತ್ತರದ ಪೂರ್ಣಪ್ರಜ್ಞಾ ಶಾಲೆಯ ಧನುಷ್ ಸುದೀರ್, ಉಡುಪಿಯ ಕುಂದಾಪುರ ತಾಲೂಕಿನ ಮದರ್ ತೆರೇಸಾ ಶಾಲೆಯ ಪ್ರೀಥಮ್ ಜಿ ಪೂಜಾರ್, ವಿಜಯಪುರದ ಮುದ್ದೇಬಿಹಾಳ ತಾಲೂಕಿನ ನಗರಬೆಟ್ಟದ ಆಕ್ಸ್ಫರ್ಡ್ ಹೈಸ್ಕೂಲ್ನ ಸೌಜನ್ಯ ಬಸವರಾಜ್ ಕಂದಕೂರ್, ರಾಯಚೂರು-ಮಾನವಿಯ ಬಿವಿಆರ್ ಹೈಸ್ಕೂಲ್ನ ಸುಖದೇವ್ ಫುಲ್ ಮಾರ್ಕ್ಸ್ ಗಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.