ಅಡೂರ್ (www.vknews.in) : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ ಬಿಜೆಪಿ ಕೊಲ್ಲಂ ಪೂರ್ವ ಜಿಲ್ಲಾ ಸಮಿತಿಯ ಸದಸ್ಯ ಮತ್ತು ಕೊಲ್ಲಂನ ಪೊರುವಾಳಿ ಪಂಚಾಯತ್ ಸಮಿತಿಯ ಅಧ್ಯಕ್ಷ ರಂಜು ತಂಕಪ್ಪನ್ (50) ಅವರನ್ನು ಅಡೂರ್ ಪೊಲೀಸರು ಬಂಧಿಸಿದ್ದಾರೆ. ಜೂನ್ 10ರಂದು ನಡೆದಿರುವುದಾಗಿ ಹೇಳಲಾಗಿರುವ ಘಟನೆಯಲ್ಲಿ, ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುವ ಹೆಸರಿನಲ್ಲಿ ಪೂಜೆ ನಡೆಸಲು ಆರೋಪಿಯು ಮನೆಗೆ ಬಂದಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಪ್ರಕಾರ, ಪೂಜೆಯ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿ ಏಕಾಂಗಿಯಾಗಿ ಇರಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಬಾಲಕಿಯು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ ಬಳಿಕ ಅಡೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದ ಆಧಾರದಲ್ಲಿ ಪೊಲೀಸರು ಪೋಕ್ಸೋ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಇತರರ ಪಾತ್ರವಿದೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.