ದಾವಣಗೆರೆ (www.vknews.in) : ರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದಿದ್ದ ಯುವ ಬಾಡಿ ಬಿಲ್ಡರ್ ಸುಶೀಲ್ (26) ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಕೆಟಿಜೆ ನಗರದ ನಿವಾಸಿಯಾಗಿದ್ದ ಸುಶೀಲ್, ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ಕನಸಿನೊಂದಿಗೆ ತರಬೇತಿ ನಡೆಸುತ್ತಿದ್ದರು ಎನ್ನಲಾಗಿದೆ.
ಮಾಹಿತಿಯ ಪ್ರಕಾರ, ರಾತ್ರಿ ಜಿಮ್ ಮುಗಿಸಿ ಮನೆಗೆ ಬಂದ ಅವರು “ತಲೆ ಸುತ್ತುತ್ತಿದೆ” ಎಂದು ಕುಟುಂಬಸ್ಥರಿಗೆ ತಿಳಿಸಿದ್ದು, ತಕ್ಷಣವೇ ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ.
ಸಾವಿನ ನಿಖರ ಕಾರಣ ವೈದ್ಯಕೀಯ ವರದಿ ಬಳಿಕವೇ ತಿಳಿಯಲಿದ್ದು, ಪ್ರಾಥಮಿಕವಾಗಿ ಹೃದಯಾಘಾತ ಅಥವಾ ಇತರೆ ಆರೋಗ್ಯ ಸಮಸ್ಯೆಯಿಂದ ಅಸ್ವಸ್ಥಗೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸುಶೀಲ್ ಯುವಕರಿಗೆ ಉಚಿತವಾಗಿ ಫಿಟ್ನೆಸ್ ತರಬೇತಿ ನೀಡುತ್ತಿದ್ದು, ಅವರ ಅಕಾಲಿಕ ನಿಧನ ಕುಟುಂಬಸ್ಥರು, ಸ್ನೇಹಿತರು ಹಾಗೂ ಕ್ರೀಡಾ ವಲಯದಲ್ಲಿ ದುಃಖ ಮೂಡಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.