ಉಳ್ಳಾಲ (www.vknews.in) : ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಒಂದೇ ಸ್ಕೂಟರ್ನಲ್ಲಿ ನಾಲ್ವರು ಯುವತಿಯರು ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ರಾತ್ರಿ ವೇಳೆ ನಡೆದ ಘಟನೆಯಲ್ಲಿ ಸ್ಕೂಟರ್ ಅತಿವೇಗದಲ್ಲಿ ಸಂಚರಿಸುತ್ತಿದ್ದಾಗ ಹಂಪ್ಸ್ ದಾಟುವ ಸಂದರ್ಭದಲ್ಲಿ ಸವಾರಿಯ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಸ್ಕೂಟರ್ನಲ್ಲಿದ್ದ ನಾಲ್ವರು ಯುವತಿಯರು ಕೆಳಗೆ ಬಿದ್ದಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಆದರೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಹೆಲ್ಮೆಟ್ ಧರಿಸದೆ ಹಾಗೂ ನಿಯಮ ಉಲ್ಲಂಘಿಸಿ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳನ್ನು ತಡೆಯಲು ಸಂಚಾರಿ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.