ಕಾರವಾರ (www.vknews.in) : ಭಟ್ಕಳದಲ್ಲಿ ಹಿಂದೂ ಯುವತಿಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೆಲ ಹಿಂದೂ ಮುಖಂಡರು ಮತ್ತು ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.
ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಠಾಣೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.