ಬಂಟ್ವಾಳ (www.vknews.in) : ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸಜಿಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತರನ್ನು ಸಜಿಪನಡು ಗ್ರಾಮದ ಮುಹಿಯುದ್ದೀನ್ ನಗರ ನಿವಾಸಿ ಅಹ್ಮದ್ ಅಸೀರ್ (22) ಎಂದು ಗುರುತಿಸಲಾಗಿದೆ.
ಅವರು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಸೀರ್ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು, ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಸಂಘಟನೆಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.