ಚೆನ್ನೈ (www.vknews.in) : ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ 19 ವರ್ಷದ ನೀಟ್ (NEET) ಪರೀಕ್ಷಾ ಅಭ್ಯರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಅನುಕೀರ್ತನಾ (19) ಮೃತ ವಿದ್ಯಾರ್ಥಿನಿ. ಈಕೆ ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದು, ಮತ್ತೊಮ್ಮೆ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು ಎನ್ನಲಾಗಿದೆ.
ಇತ್ತೀಚಿನ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ಮಾನಸಿಕವಾಗಿ ಕುಗ್ಗಿದ್ದಳು ಎಂದು ವರದಿಗಳು ತಿಳಿಸಿವೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಸಾವಿನ ಬಳಿಕ ಆಕ್ರೋಶ ವ್ಯಕ್ತವಾಗಿದ್ದು, ನೀಟ್ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ತಮಿಳುನಾಡಿಗೆ ನೀಟ್ ವಿನಾಯಿತಿ ನೀಡಬೇಕೆಂಬ ತನ್ನ ಬೇಡಿಕೆಯನ್ನು ಡಿಎಂಕೆ ಮತ್ತೆ ಮುಂದಿಟ್ಟಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ನೀಟ್ ಪರೀಕ್ಷೆಯಿಂದ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತಿದೆ ಎಂಬ ವಾದವನ್ನು ಡಿಎಂಕೆ ಪುನರುಚ್ಚರಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.