ಮುಂಬೈ (www.vknews.in) : ಪತಿಯ ಹಾಗೂ ಕುಟುಂಬದವರ ಕಿರುಕುಳದಿಂದ ಮನನೊಂದ ನವವಧುವೊಬ್ಬಳು ಮದುವೆಯಾಗಿ ಕೇವಲ 48 ದಿನಗಳಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. 26 ವರ್ಷದ ವಿಶಾಖಾ ತಿಲ್ಕರ್ ಮೃತ ಯುವತಿ.
ಏಪ್ರಿಲ್ 30ರಂದು ಡಾ. ನಿತಿನ್ ತಿಲ್ಕರ್ ಅವರೊಂದಿಗೆ ವಿವಾಹವಾಗಿದ್ದ ವಿಶಾಖಾ, ಮದುವೆಯ ಬಳಿಕ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬದವರ ಪ್ರಕಾರ, ಪತಿ ಮನೆಯೊಳಗೆ ಮತ್ತು ಹೊರಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಪತ್ನಿಯ ಚಲನವಲನಗಳ ಮೇಲೆ ನಿಗಾ ಇಡುತ್ತಿದ್ದ ಎನ್ನಲಾಗಿದೆ. ಇದರಿಂದ ವಿಶಾಖಾ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಆರೋಪಿಸಲಾಗಿದೆ.
ನೆರೆಹೊರೆಯವರೊಂದಿಗೆ ಮಾತನಾಡಿದ ವಿಚಾರಕ್ಕೂ ಹಲ್ಲೆ ನಡೆಸಲಾಗಿತ್ತು ಎಂದು ಸಂಬಂಧಿಕರು ದೂರಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ವಿಶಾಖಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಅಂಬರ್ನಾಥ್ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪತಿ ನಿತಿನ್ ತಿಲ್ಕರ್, ಅವರ ತಾಯಿ ಹಾಗೂ ಸಹೋದರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.