ಕೋಲಾರ (www.vknews.in): ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಹಾಗೂ ಎಲ್.ಜಿ. ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ ಕಾರ್ಯಕ್ರಮವನ್ನು ಜೂನ್ 29ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಘದ ಸದಸ್ಯ ಷೇರುದಾರ ಪತ್ರಕರ್ತರ ಕುಟುಂಬದ ಒಂದು ಮಗುವಿಗೆ ಮಾತ್ರ ಶೈಕ್ಷಣಿಕ ಪರಿಕರ ವಿತರಿಸಲು ನಿರ್ಧರಿಸಲಾಗಿದೆ. 1ನೇ ತರಗತಿಯಿಂದ ಯಾವುದೇ ಪದವಿ ವ್ಯಾಸಂಗದವರೆಗೆ ಪ್ರಸಕ್ತ ಸಾಲಿನಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಂದಿಗೆ ಸದಸ್ಯ ಪತ್ರಕರ್ತರು ಕಾರ್ಯಕ್ರಮಕ್ಕೆ ಆಗಮಿಸಿ ಶೈಕ್ಷಣಿಕ ಪರಿಕರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್. ಗಣೇಶ್ ಹಾಗೂ ಉಪಾಧ್ಯಕ್ಷ ಅಬ್ಬಣಿ ಶಂಕರ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಪತ್ರಕರ್ತರ ಮಕ್ಕಳಿಗೆ ಮಾತ್ರವೇ ಶೈಕ್ಷಣಿಕ ಪರಿಕರ ವಿತರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಘದ ಕಾರ್ಯದರ್ಶಿ ಬಿ.ಎಸ್.ಗಂಗಾಧರ್ ಅವರನ್ನು 9110830279 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.