ಮಂಗಳೂರು (www.vknews.in) : ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದ ಸುದ್ದಿ ಅಪಾರ ದುಃಖಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಬೆಳೆಸುವಲ್ಲಿ ತ್ವಾಕಾ ಉಸ್ತಾದ್ ಅವರು ಮಹತ್ವದ ಪಾತ್ರ ವಹಿಸಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ.
ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜಸೇವೆಯಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ತಮ್ಮ ಶಾಂತ ಸ್ವಭಾವ, ಸರಳ ನಡೆ-ನುಡಿ ಹಾಗೂ ಅಪಾರ ಧಾರ್ಮಿಕ ಪಾಂಡಿತ್ಯದಿಂದ ಜನಮನ ಗೆದ್ದಿದ್ದರು. ಅವರ ಅಗಲಿಕೆಯಿಂದ ಮುಸ್ಲಿಂ ಸಮುದಾಯ ಮಾತ್ರವಲ್ಲದೆ, ಇಡೀ ಸಮಾಜವೇ ಓರ್ವ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬದವರು, ಬಂಧು-ಮಿತ್ರರು ಮತ್ತು ಅಪಾರ ಅನುಯಾಯಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.